ಏ. 14 ರಂದು ಡಾ|| ಬಿ.ಆರ್.ಅಂಬೇಡ್ಕರ್‌ರವರ 128ನೇ ಜನ್ಮದಿನಾಚರಣೆ: ಜಿಲ್ಲಾಡಳಿತ
ಶಿವಮೊಗ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಏ. 14 ರಂದು ಬೆಳಿಗ್ಗೆ 10.00 ಗಂಟೆಗೆ ನಗರದ ಅಂಬೇಡ್ಕರ್ ಭವನದಲ್ಲಿ ಭಾರತದ ಸಂವಿಧಾನ ಶಿಲ್ಪಿ, ಭಾರತರತ್ನ ಬಾಬಾ ಸಾಹೇಬ್ ಡಾ|| ಬಿ.ಆರ್. ಅಂಬೇಡ್ಕರ್‌ರವರ 128ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಈ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಉದ್ಘಾಟಿಸುವರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಶಿವರಾಮೇಗೌಡ ಅಧ್ಯಕ್ಷತೆ ವಹಿಸುವರು. ಜಿಲ್ಲಾ ರಕ್ಷಣಾಧಿಕಾರಿ ಡಾ|| ಎಂ. ಅಶ್ವಿನಿ, ಮಹಾನಗರ ಪಾಲಿಕೆ ಆಯುಕ್ತೆ ಚಾರುಲತಾ ಸೋಮಲ್ ಅತಿಥಿಗಳಾಗಿ ಉಪಸ್ಥಿತರಿರುವರು. ಜಿಲ್ಲೆಯ ದಲಿತ ಸಂಘಟನೆ ಮತ್ತು ವಿವಿಧ ಸಂಘಟನೆಗಳ ಮುಖಂಡರು ಮತ್ತು ಪದಾಧಿಕಾರಿಗಳು ಹಾಗೂ ಜಿಲ್ಲೆಯ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಈ ಸಮಾರಂಭದಲ್ಲಿ ತೀರ್ಥಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಡಾ|| ಕೆ. ಶಿವಾಜಿರಾವ್ ಘೋರ್ಪಡೆ ಅಂಬೇಡ್ಕರ್‌ರವರ ಜೀವನ ಚರಿತ್ರೆ ಕುರಿತು ವಿಶೇಷ ಉಪನ್ಯಾಸ ನೀಡುವರು.
ಡಾ|| ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಎಸ್.ದಯಾನಂದ ಮತ್ತು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಹೆಚ್.ವಿ.ಮಂಜುನಾಥ್ ಉಪಸ್ಥಿತರಿರುವರು.
Comments
Post a Comment