ಮತದಾರರು ದಾಖಲೆಗಳನ್ನು ಹೊಂದಿರಲು ಸೂಚನೆ : ಚಾರುಲತಾ ಸೋಮಲ್


| ಶಿವಮೊಗ್ಗ ನ್ಯೂಸ್ | 10 ಏಪ್ರಿಲ್ 2019 |

ಶಿವಮೊಗ್ಗ: 23 ರಂದು ಬೆಳಿಗ್ಗೆ 7ರಿಂದ ಸಂಜೆ 6ರವರೆಗೆ ನಡೆಯಲಿರುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡುವ ಅರ್ಹ ಮತದಾರರು ಜಿಲ್ಲಾ ಚುನಾವಣಾ ಶಾಖೆಯಿಂದ ನೀಡಲಾದ ಮತದಾರರ ಗುರುತಿನ ಚೀಟಿಯಲ್ಲದೇ ಇತರೆ 11 ಬಗೆಯ ಗುರುತಿನ ಚೀಟಿಗಳಲ್ಲಿ ಯಾವುದಾದರು ಒಂದನ್ನು ಹಾಜರುಪಡಿಸಿ ಮತ ಚಲಾಯಿಸಬಹುದಾಗಿದೆ ಎಂದು ಮಹಾನಗರಪಾಲಿಕೆಯ ಆಯುಕ್ತೆ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರಿಗೆ ಗುರುತಿನ ಚೀಟಿಯನ್ನು ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ-ಮನೆಗೆ ತೆರಳಿ ವಿತರಿಸಲಿದ್ದಾರೆ. ಈ ಮತದಾರರ ಗುರುತಿನ ಚೀಟಿಯು ಮತದಾರರಿಗೆ ತಮ್ಮ ಮತದಾನ ಕೇಂದ್ರದ ಹೆಸರು ಮತ್ತು ಮತದಾರನ ಹೆಸರು ಮತದಾರರ ಪಟ್ಟಿಯ ಯಾವ ಕ್ರಮ ಸಂಖ್ಯೆಯಲ್ಲಿ ನಮೂದಿಸಿದೆ ಎಂಬ ಮಾಹಿತಿಯನ್ನು ತಿಳಿಯುವ ಉದ್ದೇಶಕ್ಕಾಗಿ ನೀಡಲಾಗುತ್ತಿದೆ ಎಂದವರು ತಿಳಿಸಿದ್ದಾರೆ.
ಈ ಮತದಾರರ ಗುರುತಿನ ಚೀಟಿಯು ಮತದಾನ ಮಾಡುವುದಕ್ಕೆ ದಾಖಲಾತಿಯಾಗಿ ಪರಿಗಣಿಸಲಾಗುವುದಿಲ್ಲ ಎಂದು ತಿಳಿಸಿರುವ ಅವರು, ಪ್ರಸಕ್ತ ಚುನಾವಣೆಯಲ್ಲಿ ಮತದಾರರ ಗುರುತಿನ ಹೊಂದಿರುವವರು ಮತ ಚಲಾಯಿಸುವಂತೆ ಗುರುತಿನ ಚೀಟಿ ಹೊಂದಿರದ ಮತದಾರರು ಚುನಾವಣಾ ಆಯೋಗವು ಸೂಚಿಸಿರುವ ಸಾಕ್ಷ್ಯಗಳನ್ನು ಹಾಜರುಪಡಿಸಿ ಮತ ಚಲಾಯಿಸಬಹುದಾಗಿದೆ. ಅವುಗಳಲ್ಲಿ ಮುಖ್ಯವಾಗಿ ಪಾಸ್‌ಪೋರ್ಟ್, ವಾಹನ ಚಾಲನಾ ಪರವಾನಿಗೆ, ಪಾನ್‌ಕಾರ್ಡ್, ಭಾವಚಿತ್ರವಿರುವ ಪಿಂಚಣಿ ದಾಖಲಾತಿ, ಆಧಾರ್ ಕಾರ್ಡ್, ಕಾರ್ಮಿಕ ಸಚಿವಾಲಯದಿಂದ ನೀಡಲಾದ ಆರೋಗ್ಯ ವಿಮೆ ಸ್ಮಾರ್ಟ್ಕಾರ್ಡ್, ಅಂಚೆ ಕಚೇರಿ/ಬ್ಯಾಂಕಿನಿಂದ ಭಾವಚಿತ್ರ ಹೊಂದಿರುವ ಪಾಸ್‌ಬುಕ್, ಉದ್ಯೋಗಖಾತ್ರಿ ಉದ್ಯೋಗ ಚೀಟಿ, ಎನ್.ಪಿ.ಆರ್. ಅಡಿಯಲ್ಲಿ ಆರ್.ಜಿ.ಐ.ರವರು ಎನ್.ಪಿ.ಆರ್. ಅಡಿಯಲ್ಲಿ ನೀಡಿದ ಸ್ಮಾರ್ಟ್ಕಾರ್ಡ್, ಕೇಂದ್ರ ಸರ್ಕಾರ/ರಾಜ್ಯ ಸರ್ಕಾರ/ಪಬ್ಲಿಕ್ ಸೆಕ್ಟರ್ ಅಂಡರ್ ಟೇಕಿಂಗ್ಸ್ ಸಾರ್ವಜನಿಕ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ನೀಡಿರುವ ಭಾವಚಿತ್ರೆವನ್ನು ಹೊಂದಿರುವ ಸೇವಾ ಗುರುತಿನ ಚೀಟಿಗಳು ಅಥವಾ ಸಂಸದರು, ವಿಧಾನಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರುಗಳಿಗೆ ನೀಡಲಾದ ಅಧಿಕೃತ ಗುರುತಿನ ಚೀಟಿಯನ್ನು ಹಾಜರುಪಡಿಸಿ ಮತ ಚಲಾಯಿಸಬಹುದಾಗಿದೆ ಎಂದವರು ತಿಳಿಸಿದ್ದಾರೆ.
ಶಿವಮೊಗ್ಗ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಗೊಳಪಡುವ ಎಲ್ಲಾ ಅರ್ಹ ಮತದಾರರು ಮೂಲ ದಾಖಲೆಯೊಂದಿಗೆ ಮತಗಟ್ಟೆಗೆ ತೆರಳಿ ಮತ ಚಲಾಯಿಸಿ ಶೇ.100ರಷ್ಟು ಮತದಾನವಾಗುವಂತೆ ಶ್ರಮಿಸಬೇಕಲ್ಲದೇ ಪ್ರಜಾಪ್ರಭುತ್ವದ ಬೇರುಗಳು ಗಟ್ಟಿಗೊಳ್ಳಲು ಸಹಕರಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Comments

Popular posts from this blog

ಕುಡಿಯುವ ನೀರು ಪೂರೈಕೆ ವ್ಯತ್ಯಯ: ಸಹಕರಿಸಲು ಮನವಿ

ದತ್ತಿನಿಧಿ ಪುಸ್ತಕ ಪ್ರಶಸ್ತಿಗಳಿಗೆ ಪುಸ್ತಕಗಳ ಆಹ್ವಾನ: ಕನ್ನಡ ಸಾಹಿತ್ಯ ಪರಿಷತ್‌

ಉಚಿತ ಆರೋಗ್ಯ ತಪಾಸಣಾ ಶಿಬಿರ: ಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ