ಪ್ರತಿಷ್ಠಿತ ಶಾಲೆಗಳ ಪ್ರವೇಶಕ್ಕೆ ಅರ್ಹತಾ ಪರೀಕ್ಷೆ: ಸಮಾಜ ಕಲ್ಯಾಣ ಇಲಾಖೆ

ಶಿವಮೊಗ್ಗ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2019-20ನೇ ಸಾಲಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಗುರುತಿಸಲಾಗಿರುವ ಪ್ರತಿಷ್ಠಿತ ಶಾಲೆಗಳಿಗೆ 5ನೇ ತರಗತಿಯಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕಪಡೆದು ಉತ್ತೀರ್ಣರಾಗಿರುವ ಪ್ರತಿಭಾವಂತ ಪರಿಶಿಷ್ಟ ವರ್ಗದ 18 ಸ್ಥಾನಗಳಿಗೆ 6ನೇ ತರಗತಿಗೆ ಅರ್ಹತಾ ಪರೀಕ್ಷೆ ಮೂಲಕ ದಾಖಲಿಸಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಏಪ್ರಿಲ್ 11ರಿಂದ 30ರವರೆಗೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಹಾಗೂ ಆಯಾ ತಾಲೂಕಿನ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆಯಲ್ಲಿ ನಿಗಧಿತ ನಮೂನೆಯ ಅರ್ಜಿಯನ್ನು ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಲು ಸೂಚಿಸಿದೆ.
ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಶಿವಮೊಗ್ಗ ಹಾಗೂ ಎಲ್ಲಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಕಚೇರಿ ವೇಳೆಯಲ್ಲಿ ಅಥವಾ ದೂರವಾಣಿ ಸಂಖ್ಯೆ 08182-279222ನ್ನು ಸಂಪರ್ಕಿಸಬಹುದಾಗಿದೆ.

Comments

Popular posts from this blog

ಕುಡಿಯುವ ನೀರು ಪೂರೈಕೆ ವ್ಯತ್ಯಯ: ಸಹಕರಿಸಲು ಮನವಿ

ದತ್ತಿನಿಧಿ ಪುಸ್ತಕ ಪ್ರಶಸ್ತಿಗಳಿಗೆ ಪುಸ್ತಕಗಳ ಆಹ್ವಾನ: ಕನ್ನಡ ಸಾಹಿತ್ಯ ಪರಿಷತ್‌

ಉಚಿತ ಆರೋಗ್ಯ ತಪಾಸಣಾ ಶಿಬಿರ: ಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ