ದತ್ತಿನಿಧಿ ಪುಸ್ತಕ ಪ್ರಶಸ್ತಿಗಳಿಗೆ ಪುಸ್ತಕಗಳ ಆಹ್ವಾನ: ಕನ್ನಡ ಸಾಹಿತ್ಯ ಪರಿಷತ್
ಶಿವಮೊಗ್ಗ: ಕನ್ನಡ ಸಾಹಿತ್ಯ ಪರಿಷತ್‌ನಿಂದ ನೀಡಲಾಗುವ ವಿವಿಧ ಧತ್ತಿನಿಧಿ ಪ್ರಶಸ್ತಿಗಳಿಗೆ ಕೃತಿಗಳನ್ನ ಆಹ್ವಾನಿಸಲಾಗಿದ್ದು, ಸ್ಪರ್ದಿಗಳು ಪ್ರತಿ ಸ್ಪರ್ದೆಗೂ ಮೂರು ಪುಸ್ತಕಗಳನ್ನು ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು 560018 ಇಲ್ಲಿಗೆ ಮೇ 15ರೊಳಗಾಗಿ ತಲುಪುವಂತೆ ಕಳಿಸಿಕೊಡಲು ಸೂಚಿಸಲಾಗಿದೆ.
ಭಾಗವಹಿಸುವ ಲೇಖಕರು ಸ್ಪರ್ದೆಯ ದತ್ತಿ ಹೆಸರು, ತಮ್ಮ ಹೆಸರು, ವಿಳಾಸ ಹಾಗೂ ಮೊಬೈಲ್ ಸಂಖ್ಯೆಯನ್ನು ನಮೂದಿಸುವಂತೆ ಸೂಚಿಸಲಾಗಿದೆ. ವಿವಿಧ ಸ್ಪರ್ದೆಗಳ ಹೆಸರು ಹಾಗೂ ಹೆಚ್ಚಿನ ವಿವರಗಳಿಗೆ ಸ್ವ ವಿಳಾಸದ ಸ್ಟಾಂಪ್ ಹಚ್ಚಿದ ಲಕೋಟೆ ಇಟ್ಟು ಪತ್ರ ಬರೆಯಬಹುದು ಅಥವಾ www.kasapa.in ವೆಬ್‌ಸೈಟ್ ಮೂಲಕ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Comments
Post a Comment