

ಶಿವಮೊಗ್ಗ: ನಗರದಲ್ಲಿ ಮತ್ತೊಮ್ಮೆ ರೌಡಿ ಶೀಟರ್ ಬರ್ಬರ ಹತ್ಯೆ. ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿ ಶೀಟರ್ ಪ್ರವೀನ್(23) ಅನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸೋಮಿನಕೊಪ್ಪ ಸಮೀಪದ ಮಧ್ವ ನಗರ ಬಳಿ ಬೈಕ್ ನಲ್ಲಿ ತೆರಳುತ್ತಿದ್ದ ಪ್ರವೀಣನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದೆ. ದುಷ್ಕರ್ಮಿಗಳ ದಾಳಿಗೆ ಒಳಗಾದ ಪ್ರವೀಣ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ದಾಳಿ ಮಾಡಿದವರು ವ್ಯವಸ್ಥಿತವಾಗಿ ಸಂಚು ರೂಪಿಸಿ ಕಾರಿನಲ್ಲಿ ಬಂದಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಕೆಲವು ತಿಂಗಳ ಹಿಂದೆ ನಗರದ ಆಟೋ ಕಾಂಪ್ಲೆಕ್ಸ್ ನ ಟೀ ಅಂಗಡಿಯಲ್ಲಿ ಮಧು ಎಂಬಾತನ ಹತ್ಯೆಯಾಗಿತ್ತು. ಈ ಪ್ರಕರಣದ ಪ್ರಮುಖ ಆರೋಪಿಯಾದ ಪ್ರವೀಣ್ ಜೈಲಿಗೂ ಹೋಗಿ ಇತ್ತೀಚೆಗೆ ಜಾಮೀನು ಸಿಕ್ಕಿದ್ದರಿಂದ ಹೊರ ಬಂದಿದ್ದ. ಹಾಗೂ ಪ್ರವೀಣ ಹತ್ಯೆಗೆ ನಿಖರ ಕಾರಣಗಳು ಇನ್ನೂ ತಿಳಿದುಬಂದಿಲ್ಲ. ಪ್ರಕರಣ ವಿನೋಬನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
Comments
Post a Comment