ನಗರ ಪ್ರದೇಶದ ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಅಗತ್ಯ ಕ್ರಮ : ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ : ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಗೊಳಪಡುವ ಅಂಗನವಾಡಿಯಿಂದ ಪ್ರೌಢಶಾಲೆಯವರೆಗಿನ ಎಲ್ಲಾ ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಸರ್ಕಾರದ ಯೋಜನೆಗಳು, ಮಹಾನಗರಪಾಲಿಕೆ, ದಾನಿಗಳು ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು. ಅವರು ಇಂದು ಜಿಲ್ಲಾಡಳಿತ ಭವನದಲ್ಲಿ ನಗರ ವ್ಯಾಪ್ತಿಯ ಎಲ್ಲಾ ಸರ್ಕಾರಿ ಶಾಲೆಗಳ ಮುಖ್ಯೋಪಾಧ್ಯರು ಹಾಗೂ ಮೇಲುಸ್ತವಾರಿ ಸಮಿತಿ ಅಧ್ಯಕ್ಷರ ಉಪಸ್ಥಿತಿಯಲ್ಲಿ ಸರ್ಕಾರಿ ಶಾಲೆಗಳ ಸರ್ವಾಂಗೀಣ ವಿಕಾಸಕ್ಕಾಗಿ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಏರ್ಪಡಿಸಿದ್ದ ಚಿಂತನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಕಳೆದ ದಶಕಗಳಿಂದೀಚೆಗೆ ಸರ್ಕಾರಿ ಶಾಲೆಗಳ ಅಭಿವೃಧ್ಧಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ನಿರೀಕ್ಷಿತ ಅನುದಾನ ಲಬ್ಯವಾಗುತ್ತಿಲ್ಲ. ಅಲ್ಲದೇ ಶಾಲೆಗಳ ಮಕ್ಕಳ ಸಂಖ್ಯೆಗನುಗುಣವಾಗಿ ಕಟ್ಟಡಗಳು, ಪೀಠೋಪಕರಣಗಳು, ಕುಡಿಯುವ ನೀರಿನ ಪೂರೈಕೆ ಇತ್ಯಾದಿ ಸಮಸ್ಯೆಗಳ ಕುರಿತು ಗಂಭೀರ ಸ್ವರೂಪದ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಕಟ್ಟಡಗಳ ದುರಸ್ತಿ, ನವೀಕರಣ, ಕುಡಿಯುವ ನೀರು, ಶೌಚಾಲಯ ಮುಂತಾದವುಗಳನ್ನು ಕೊಡುಗೈ ದಾನಿಗಳಿಂದ ದಾನ ಪಡೆದು, ಅದರಿಂದ ಬರುವ ಅನುದಾನದಿಂದ ಆದ್ಯತೆಯನುಸಾರ ಶಾಲೆಗಳ ವಿಕಾಸಕ್ಕೆ ಕ್ರಮ ಕೈಗೊಳ್ಳಲು ಉದ್ದೇಶಿಸಲಾಗಿದೆ ಎಂದ ಅವರು, ಅ...