Posts

Showing posts from August, 2019

ಮಳೆ ಪ್ರವಾಹ : ಸಂತ್ರಸ್ಥರ ನೆರವಿಗೆ ಧಾವಿಸಿದ ಜಿಲ್ಲಾಡಳಿತ

Image
ಶಿವಮೊಗ್ಗ : ಜಿಲ್ಲೆಯಲ್ಲಿ 4-5ದಿನಗಳಿಂದ ಅವ್ಯಾಹತವಾಗಿ ಸುರಿಯುತ್ತಿರುವ ಕುಂಭದ್ರೊÃಣ ಮಳೆಯಿಂದಾಗಿ ಸಹಸ್ರಾರು ಹೆಕ್ಟೆÃರ್ ಭೂಪ್ರದೇಶ ಜಲಾವೃತಗೊಂಡಿದೆ. ಅಸಂಖ್ಯಾತ ಮನೆಗಳು ಭಾಗಶಃ ಹಾನಿಗೊಳಗಾಗಿವೆ. ನಗರದ ಹಲವು ತಗ್ಗು ಪ್ರದೇಶಗಳ ನಿವಾಸಿಗಳ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ಥಗೊಂಡಿರುವುದನ್ನು ಗಮನಿಸಿದ ಜಿಲ್ಲಾಡಳಿತ ಸಂತ್ರಸ್ಥರ ನೆರವಿಗೆ ಧಾವಿಸಿದೆ. ಸಂತ್ರಸ್ಥರಿಗೆ ವಸತಿ ವ್ಯವಸ್ಥೆ ಕಲ್ಪಿಸಲು ಜಿಲ್ಲಾಡಳಿತದ ವತಿಯಿಂದ ನಗರದ ರಾಮಣ್ಣಶ್ರೆÃಷ್ಠಿ ಪಾರ್ಕ್, ಇಮಾಮ್‌ಬಾಡದ ಶಾದಿಮಹಲ್, ಬಾಪೂಜಿನಗರದ ಸರ್ಕಾರಿ ಶಾಲೆ ಹಾಗೂ ವಿದ್ಯಾನಗರದ ರಾಜೀವ್‌ಗಾಂಧಿ ಬಡಾವಣೆಯಲ್ಲಿ ನೆರೆ ಪರಿಹಾರ ಕೇಂದ್ರಗಳಲ್ಲಿ ತಾತ್ಕಾಲಿಕ ವಸತಿ ವ್ಯವಸ್ಥೆ ಕಲ್ಪಿಸಲಾಗಿದ್ದು, ಸಂತ್ರಸ್ಥರು ಇಲ್ಲಿ ತಂಗಲು ವ್ಯವಸ್ಥೆ ಕಲ್ಪಿಸಿದೆ. ಅಲ್ಲದೇ ಜಲಾವೃತಗೊಂಡ ಪ್ರದೇಶಗಳಿಗೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ, ಅಗತ್ಯ ನೆರವು ಪರಿಹಾರ ಕಾರ್ಯ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಹಶೀಲ್ದಾರರು, ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದ್ದು, ಸ್ಥಳೀಯವಾಗಿ ಲಭ್ಯವಿದ್ದು, ಸಂತ್ರಸ್ಥರಿಗೆ ಅಗತ್ಯ ನೆರವನ್ನು ಒದಗಿಸಲು ಸೂಚಿಸಿದ್ದಾರೆ. ವಿದ್ಯುತ್ ಸಂಪರ್ಕ ಕಡಿತಗೊಂಡ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ತಕ್ಷಣದಲ್ಲಿ ದುರಸ್ತಿ ಕ್ರಮ ಕೈಗೊಂಡು ವಿದ್ಯುತ್ ಸಂಪರ್ಕ ಕಲ್ಪ...