
ಶಿವಮೊಗ್ಗ: ಶಂಕರಘಟ್ಟ ಕುವೆಂಪು ವಿಶ್ವವಿದ್ಯಾಲಯದ 30ನೇ ವಾರ್ಷಿಕ ಘಟಿಕೋತ್ಸವವನ್ನು ಮಾರ್ಚ್ 28 ರಂದು ನಿಗಧಿಪಡಿಸಿ ಅಧಿಸೂಚನೆ ಹೊರಡಿಸಲಾಗಿತ್ತು. ದೇಶದಲ್ಲಿ ಕೊರೋನಾ ಮಾರಾಣಾಂತಿಕ ವೈರಾಣು ವ್ಯಾಪಕವಾಗಿ ಹರಡುವುದನ್ನು ತಡೆಗಟ್ಟಲು ಸಭೆ, ಸಮಾರಂಭ ಇತ್ಯಾದಿಗಳನ್ನು ಮುಂದೂಡಲು ನವದೆಹಲಿಯ ವಿಶ್ವವಿದ್ಯಾಲಯ ಧನಸಹಾಯ ಆಯೋಗದ ಕಾರ್ಯದರ್ಶಿಗಳು ಸೂಚಿಸಿರುವುದರಿಂದ ಘಟಿಕೋತ್ಸವವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ ಎಂದು ಕುವೆಂಪು ವಿವಿಯ ಕುಲಸಚಿವರ ಪ್ರೊ|| ಎಸ್.ಎಸ್. ಪಾಟೀಲ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Comments
Post a Comment