ವಸತಿ ಶಾಲೆಗಳ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ: ಸಮಾಜ ಕಲ್ಯಾಣ ಇಲಾಖೆ

ಶಿವಮೊಗ್ಗ: ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿ  ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ ಕಿತ್ತೂರು ರಾಣಿ ಚೆನ್ನಮ್ಮ ವಸತಿ/ ಏಕಲವ್ಯ ಮಾದರಿ/ಅಟಲ್ ಬಿಹಾರಿ ವಾಜಪೇಯಿ/ಶ್ರೀಮತಿ ಇಂದಿರಾ ಗಾಂಧಿ/ ಡಾ|| ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳ 6ನೇ ತರಗತಿಯ ಪ್ರವೇಶ ಪರೀಕ್ಷೆಗೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
2019-20ನೇ ಸಾಲಿನಲ್ಲಿ 5ನೇ ತರಗತಿ ವ್ಯಾಸಂಗ ಮಾಡುತ್ತಿರುವ ಆಸಕ್ತ ಪ.ಜಾ/ಪ.ವ/ಸಾಮಾನ್ಯ/ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ನಿಗಧಿತ ನಮೂನೆ ಅರ್ಜಿಗ
ಳನ್ನು ಆಯಾ ತಾಲೂಕು ಆಯಾ ವಸತಿ ಶಾಲೆಗಳಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ದಿ:03.04.2020 ರೊಳಗಾಗಿ ಸಂಬಂಧಪಟ್ಟ ಆಯಾ ತಾಲೂಕಿನ ಆಯಾ ವಸತಿ ಶಾಲೆಗಳಲ್ಲಿ ಆನ್‍ಲೈನ್ ಮೂಲಕ ಮಾತ್ರ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿರುತ್ತಾರೆ.
  ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ದೂ.ಸಂ. 08182-249241 /ತಾಲೂಕು ಸಹಾಯಕ ನಿರ್ದೇಶಕರು, ಹಿಂ.ವ.ಕ.ಇಲಾಖೆಯ ತಾಲೂಕು ವಿಸ್ತರಣಾಧಿಕಾರಿಗಳು ಅಥವಾ ಆಯಾ ವಸತಿ ಶಾಲೆಗಳನ್ನು ಸಂಪರ್ಕಿಸುವುದು.

Comments

Popular posts from this blog

ಕುಡಿಯುವ ನೀರು ಪೂರೈಕೆ ವ್ಯತ್ಯಯ: ಸಹಕರಿಸಲು ಮನವಿ

ದತ್ತಿನಿಧಿ ಪುಸ್ತಕ ಪ್ರಶಸ್ತಿಗಳಿಗೆ ಪುಸ್ತಕಗಳ ಆಹ್ವಾನ: ಕನ್ನಡ ಸಾಹಿತ್ಯ ಪರಿಷತ್‌

ಉಚಿತ ಆರೋಗ್ಯ ತಪಾಸಣಾ ಶಿಬಿರ: ಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ